ಅಥಣಿ : ಕಳ್ಳತನಕ್ಕೆ ಬಂದ ಮೂವರು ಅಂತರರಾಜ್ಯ ಕಳ್ಳರನ್ನು ಗ್ರಾಮಸ್ಥರು ಹಾಗೂ ಪೊಲೀಸರು ಬಂಧಿಸಿದ ಘಟನೆ ಅಥಣಿ ತಾಲೂಕಿನ ಬಡಚ್ಚಿ ಗ್ರಾಮದಲ್ಲಿ ಶನಿವಾರ ರಾತ್ರಿ ನಡೆದಿದೆ. ಕಳ್ಳತನಕ್ಕೆ ಬಂದ ಐದು ಜನ ಕಳ್ಳರ ಗ್ಯಾಂಗ್ ನ್ನು ತಡರಾತ್ರಿ ಮೂರು ಜನ ಕಳ್ಳರನ್ನು ಹಿಡಿದ ಗ್ರಾಮಸ್ಥರ ಕಾರ್ಯ ಮೆಚ್ಚುವಂಥದ್ದು. ಗ್ರಾಮಸ್ಥರು ನೋಡುತ್ತಿದ್ದಂತೆ ಪರಾರಿಯಾಗಲು ಯತ್ನಿಸಿದಾಗ ತಕ್ಷಣವೇ ಪೊಲೀಸರು ಗ್ರಾಮಸ್ಥರು ಸೇರಿಕೊಂಡು ಕಾರ್ಯಾಚರಣೆ ನಡೆಸಿ ಮೂವರು ಮನೆಗಳ್ಳರು ಪೊಲೀಸರ ವಶಕ್ಕೆ, ಇಬ್ಬರು ಪರಾರಿಯಾಗಿದ್ದಾರೆ. ದರೋಡೆಕೋರ ಬಳಿ ಕಂಟ್ರಿ ಪಿಸ್ತೂಲು ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಮಹಾರಾಷ್ಟ್ರ ಮೂಲದ ದರೋಡೆಕೋರರೆಂದು ಪೋಲಿಸ್ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ನಡೆದಿದೆ. ವರದಿ: ಲಕ್ಷ್ಮಣ ಮೂಕಿ,8618861316
ಮಹಾರಾಷ್ಟ್ರ ಜತ್ತ : ನಾನು ಕಳೆದ ಹಲವು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುತ್ತಿದ್ದೇನೆ. ತಾಲೂಕಿನಲ್ಲಿ ಬೇರು ಮಟ್ಟದಲ್ಲಿ ಪಕ್ಷವನ್ನು ಸಂಘಟಿಸುವ ಮೂಲಕ ಇವತ್ತು ಬಿಜೆಪಿಯನ್ನು ತಾಲೂಕಿನಾದ್ಯಂತ ಗಟ್ಟಿಗೊಳಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಜತ್ತ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುವ ಇಚ್ಛೆ ಹೊಂದಿದ್ದೇನೆ ಎಂದು ಜತ್ತ ವಿಧಾನಸಭಾ ಕ್ಷೇತ್ರದ ಬಿಜೆಪಿ ಆಕಾಂಕ್ಷಿ ತಮ್ಮನಗೌಡ ರವಿ ಪಾಟೀಲ್ ಹೇಳಿದ್ದಾರೆ. ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಭಾಗವಾಗಿರುವ ಜತ್ತ ಕ್ಷೇತ್ರದಲ್ಲೂ ನವೆಂಬರ್ 20ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಅವರು, ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ನಾನು ತಳಮಟ್ಟದಿಂದ ಕೆಲಸ ಮಾಡಿದ್ದೇನೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಕಾರ್ಯವನ್ನು ಮಾಡಿದ್ದೇನೆ. ಯಾವುದೇ ಅಧಿಕಾರ ಇಲ್ಲದಿದ್ದರೂ ಸಹ ಈ ಕ್ಷೇತ್ರದ ಏಳ್ಗೆಗಾಗಿ ನನ್ನದೇಯಾದ ರೀತಿಯಲ್ಲಿ ಅನೇಕ ಜನಪರ ಕೆಲಸಗಳನ್ನು ಕೈಗೊಂಡಿದ್ದೇನೆ. ಇದನೆಲ್ಲ ಗಮನಿಸಿ ಪಕ್ಷದ ನಾಯಕರು ನನಗೆ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡುವ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ನನಗೆ ಪಕ್ಷವು ಟಿಕೆಟ್ ನೀಡದೆ ಹೋದರೆ ಹೊರಗಿನವರಿಗೆ ಅವಕಾಶ ...