ಅಥಣಿ : ಕೆಲಸದ ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ಕಳೆದ ಎರಡು ದಿನಗಳಿಂದ ಕರ್ತವ್ಯವನ್ನು ಬಹಿಷ್ಕರಿಸಿ ಅಥಣಿ ಪಟ್ಟಣದ ತಹಶೀಲ್ದಾರ್ ಕಚೇರಿ ಮಿನಿ ವಿಧಾನಸೌಧದ ಎದುರಿಗೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.( ನಮ್ಮ ಯೂಟ್ಯೂಬ್ ಚಾನೆಲ್ ಓಪನ್ ಮಾಡಿ ) ಕಂದಾಯ ಇಲಾಖೆಯ ನೌಕರರ ಸಂಘದ ಕಾರ್ಯದರ್ಶಿ ಸಿದ್ದು ಅವಟಿ ಮಾತನಾಡಿ ನಾವು ಬೆಳಿಗ್ಗೆ 8 ಗಂಟೆಯಿಂದ ಸಂಜೆ 8 ಗಂಟೆಯವರೆಗೆ ಕೆಲಸ ನಿರ್ವಹಿಸುತ್ತಿದ್ದು, ನಮಗೆ ಸರ್ಕಾರ ಯಾವುದೇ ರೀತಿಯ ಸೌಲಭ್ಯ ನೀಡುತ್ತಿಲ್ಲ ಆದ್ದರಿಂದ ಮುಷ್ಕರ ಕೈಗೊಳ್ಳಲಾಗಿದೆ. ನಮ್ಮ ರಾಜ್ಯ ಸಂಘಟನೆಯ ನಿರ್ದೇಶನದಂತೆ ಎರಡು ದಿನಗಳ ಕಾಲ ಇಲ್ಲಿ ಪ್ರತಿಭಟನೆ ನಡೆಸಿದ್ದೇವೆ. ಶುಕ್ರವಾರ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲಾಗುವುದು. ನಮ್ಮ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸದೆ ಹೋದಲ್ಲಿ ಈ ಹೋರಾಟವನ್ನು ಬೆಂಗಳೂರಿನಲ್ಲಿ ನಡೆಸಲಾಗುವುದು ಎಂದು ಹೇಳಿದರು. ರೈತ ಮುಖಂಡ ಮಹಾದೇವ ಮಡಿವಾಳ ಮಾತನಾಡಿ ಕಂದಾಯ ಇಲಾಖೆಯ ನೌಕರರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು ಈ ವೇಳೆ ಮುಷ್ಕರದಲ್ಲಿ ಎಂ ಎಂ ಮಿರ್ಜಿ, ಎಂ ಎಂ ಮಲ್ಲುಖಾನ, ಕೆ ಜಿ ಕನಮಡಿ, ಎಸ್ ಎ ಸಿಂದಗಿ, ಆರ್ ಪಿ ಕ್ಷತ್ರಿ, ಬಿಎಸ್ ನೇಮಗೌಡ, ಬಿ ಎ ಹುನ್ನೂರ, ಅಶೋಕ ಕೋಗಿಲೆ,ಎಂ ಕೆ ಕೊಟ್ರಶೆಟ್ಟಿ, ಸುನಿತ...
ಲಕ್ಷ್ಮಣ ಮೂಕಿ ಸಾರಥ್ಯದಲ್ಲಿ ಉತ್ತರ ಕರ್ನಾಟಕದ ಫಾಸ್ಟ್ ಕನ್ನಡ ನ್ಯೂಸ್