ಬೆಂಗಳೂರು: ರಾಜ್ಯದ ವಿವಿದೆಡೆ ಮಳೆಯಾಗುತ್ತಿದ್ದು, ಬುಧವಾರದಿಂದ ಮತ್ತಷ್ಟು
ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅರಬ್ಬಿ ಸಮುದ್ರ ದಲ್ಲಿ ವಾಯುಭಾರ ಕುಸಿತ ಹಿನ್ನೆಲೆ, ಬುಧವಾರದಿಂದ ಕರಾವಳಿ, ಒಳನಾಡು ಭಾಗದಲ್ಲಿ ಮಳೆ ಹೆಚ್ಚಾಗಲಿದೆ. ಹಾಗಾಗಿ, ಅ.16 ಮತ್ತು 17ಕ್ಕೆ ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಅ.18ಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೊಡಗು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅ.18 ಮತ್ತು 19ಕ್ಕೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮ ರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರಿಗೆ ಯೆಲ್ಲೋ ಅಲ ರ್ಟ್ ನೀಡಲಾಗಿದೆ. ಅ.18ಕ್ಕೆ ತುಮಕೂರು, ಶಿವಮೊಗ್ಗ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.
Comments
Post a Comment