ಸಿಂಧೂರ ಗ್ರಾಮದಲ್ಲಿ ಕಳ್ಳರ ಭೀತಿ: ಗ್ರಾಮಸ್ಥರಿಗೆ ವಿಶೇಷ ಎಚ್ಚರಿಕೆ ಸೂಚನೆ

ಇತ್ತೀಚಿನ ದಿನಗಳಲ್ಲಿ ಸಿಂಧೂರ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಹೆಚ್ಚಾಗಿರುವ ಹಿನ್ನೆಲೆ ಗ್ರಾಮಸ್ಥರು ಹೆಚ್ಚಿನ ಜಾಗೃತಿಯಿಂದ ಇರಬೇಕೆಂದು ಸಾರ್ವಜನಿಕ ಪ್ರಕಟಣೆ ನೀಡಲಾಗಿದೆ.

ರಾತ್ರಿ ಸಮಯದಲ್ಲಿ ಬೈಕ್‌ಗಳಲ್ಲಿ ಸಂಚರಿಸುವ ಅಪರಿಚಿತ ವ್ಯಕ್ತಿಗಳ ಮೇಲೆ ಗಮನ ಹರಿಸುವಂತೆ ಗ್ರಾಮಸ್ಥರಿಗೆ ಮನವಿ ಮಾಡಲಾಗಿದೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ತಕ್ಷಣ ಗ್ರಾಮ ಹಿರಿಯರು ಅಥವಾ ಪೊಲೀಸ್ ಇಲಾಖೆಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.

ಮನೆಗಳಲ್ಲಿ ಇರುವ ಚಿನ್ನಾಭರಣ, ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ಸುರಕ್ಷಿತವಾಗಿ ಲಾಕರ್‌ಗಳಲ್ಲಿ ಇಡಬೇಕು ಎಂದು ಸಲಹೆ ನೀಡಲಾಗಿದೆ. ರಾತ್ರಿ ವೇಳೆ ಮನೆಗಳ ಮುಂದೆ ನಿಲ್ಲಿಸುವ ಬೈಕ್ ಹಾಗೂ ವಾಹನಗಳನ್ನು ಕಡ್ಡಾಯವಾಗಿ ಲಾಕ್ ಮಾಡಬೇಕೆಂದು ತಿಳಿಸಲಾಗಿದೆ.

ಗ್ರಾಮದಲ್ಲಿ ಮನೆ ಮನೆಗೆ ಬಂದು ವಸ್ತುಗಳನ್ನು ಮಾರಾಟ ಮಾಡುವ ಅಪರಿಚಿತ ವ್ಯಕ್ತಿಗಳ ಬಗ್ಗೆ ಎಚ್ಚರಿಕೆಯಿಂದಿರಬೇಕು. ಅಗತ್ಯವಿಲ್ಲದಿದ್ದರೆ ಮನೆಯೊಳಗೆ ಪ್ರವೇಶ ನೀಡಬಾರದು ಎಂದು ಸಾರ್ವಜನಿಕರಿಗೆ ಎಚ್ಚರಿಕೆ ನೀಡಲಾಗಿದೆ.

ಇದಲ್ಲದೆ ಮನೆಗಳ ಸುತ್ತಮುತ್ತ ಸಿಸಿಟಿವಿ ಕ್ಯಾಮೆರಾ, ಸೆನ್ಸಾರ್ ಲೈಟ್ ಅಳವಡಿಸುವುದು ಉತ್ತಮ ಎಂದು ಸಲಹೆ ನೀಡಲಾಗಿದೆ. ಪಕ್ಕದ ಮನೆಯವರ ಜೊತೆ ಸಂಪರ್ಕದಲ್ಲಿದ್ದು ಪರಸ್ಪರ ಗಮನವಿರಲಿ ಎಂದು ಗ್ರಾಮಸ್ಥರಿಗೆ ಮನವಿ ಮಾಡಲಾಗಿದೆ.

ಹೊರಗಡೆ ಪ್ರಯಾಣಕ್ಕೆ ತೆರಳುವ ಮುನ್ನ ಮನೆ ಬಾಗಿಲು ಹಾಗೂ ಕಿಟಕಿಗಳನ್ನು ಸರಿಯಾಗಿ ಲಾಕ್ ಮಾಡಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ನಮ್ಮ ಜಾಗ್ರತೆ ನಮ್ಮ ಸುರಕ್ಷತೆ ಎಂಬ ಸಂದೇಶದೊಂದಿಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.

ವಿಶೇಷ ಸೂಚನೆಗಳೊಂದಿಗೆ ನನ್ನ ವರದಿ: ಲಕ್ಷ್ಮಣ ಮೂಕಿ 
UK FAST KANNADA NEWS 

Comments