ಅಥಣಿ : ಜೂನ್ 1: 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಪ್ರಾರಂಭೋತ್ಸವ ಹಾಗೂ ಪೋಷಕ-ಶಿಕ್ಷಕರ ಮಹಾಸಭೆಯನ್ನು ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಬಂಗ್ಯಾನ ಖೋಡಿ ತೋಟ ಬಳ್ಳಿಗೇರಿ ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.
ಕರ್ನಾಟಕ ರಾಜ್ಯದಾದ್ಯಂತ ಶಾಲಾ-ಕಾಲೇಜುಗಳು ಇಂದಿನಿಂದ ಪುನರಾರಂಭಗೊಂಡ ಹಿನ್ನೆಲೆ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣಕ್ಕಾಗಿ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಹೆಚ್ಚಿನ ಸಂಖ್ಯೆಯಲ್ಲಿ ದಾಖಲಿಸುವ ಅಗತ್ಯವಿದೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಗುಣಮಟ್ಟದ ಶಿಕ್ಷಣದೊಂದಿಗೆ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಸರ್ಕಾರಿ ಶಾಲೆಗಳು ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಗಣ್ಯರು ತಿಳಿಸಿದರು.
ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಗುಲಾಬಿ ಹೂ ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು. ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ವಿದ್ಯಾರ್ಥಿಗಳು ಉತ್ಸಾಹ ಹಾಗೂ ಸಂತೋಷದಿಂದ ಬರಮಾಡಿಕೊಂಡರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಬಿ.ಆರ್. ಪಾಟೀಲ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ಪರಿಶ್ರಮ ಹಾಗೂ ಉತ್ತಮ ಶಿಕ್ಷಣದ ಮೂಲಕ ಜೀವನದಲ್ಲಿ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಶಿಕ್ಷಕರಾದ ಮಹಾಂತೇಶ ಗುಡದಿನ್ನಿ, ವಿದ್ಯಾ ಕೋಲಿ, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪೋಷಕರು, ಗ್ರಾಮಸ್ಥರು ಹಾಗೂ ಹಿರಿಯರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ವರದಿ : ಲಕ್ಷ್ಮಣ ಮೂಕಿ,8618861316
UK FAST KANNADA NEWS
Comments
Post a Comment